Breaking News

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಎದೆಗೆ ಗುಂಡು ಹಾರಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಡಿಜೆ ವಿಚಾರವಾಗಿ ನಡೆದ ಗಲಾಟೆಯೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವ ಅನುಮಾನವಿದೆ. ಘಟನಾ ಸ್ಥಳದಲ್ಲಿ ಎರಡು ಖಾಲಿ ಬುಲೆಟ್‌ಗಳು ಪತ್ತೆಯಾಗಿವೆ. ಗಾಂಧಿಚೌಕ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share News

About BigTv News

Check Also

ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: 1.86 ಲಕ್ಷ ರೂ. ವಂಚನೆ

ಕುಂದಾಪುರದ ಗುಲ್ವಾಡಿ ಗ್ರಾಮದ ಸೌಕೂರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗದ ಜಾಹೀರಾತು ನಂಬಿದ ಮಹಿಳೆಯೊಬ್ಬರು ಸೈಬರ್ ವಂಚಕರಿಂದ ₹1,86,570 ಕಳೆದುಕೊಂಡಿದ್ದಾರೆ. ರೇಣುಕಾ ಗಣೇಶ …

Leave a Reply

Your email address will not be published. Required fields are marked *