Breaking News

ತೋಟದ ಮನೆಯಲ್ಲಿದ್ದ ಕಾರ್ಮಿಕನ ಕತ್ತು ಕೊಯ್ದು ಭೀಕರ ಹತ್ಯೆ!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ತೋಟದ ಮನೆಯೊಂದರಲ್ಲಿ 52 ವರ್ಷದ ಕಾರ್ಮಿಕ ಲಕ್ಷ್ಮಣ ಎಂಬುವವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತಿರುಪತಿಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತೋಟದ ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದರು. ನವೆಂಬರ್ 6ರ ರಾತ್ರಿ ತೋಟದ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಲಕ್ಷ್ಮಣ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್ಪಿ ಜೀತೇಂದ್ರ ಕುಮಾರ್ ದಾಯ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: 1.86 ಲಕ್ಷ ರೂ. ವಂಚನೆ

ಕುಂದಾಪುರದ ಗುಲ್ವಾಡಿ ಗ್ರಾಮದ ಸೌಕೂರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗದ ಜಾಹೀರಾತು ನಂಬಿದ ಮಹಿಳೆಯೊಬ್ಬರು ಸೈಬರ್ ವಂಚಕರಿಂದ ₹1,86,570 ಕಳೆದುಕೊಂಡಿದ್ದಾರೆ. ರೇಣುಕಾ ಗಣೇಶ …

Leave a Reply

Your email address will not be published. Required fields are marked *