Breaking News

ವಿದ್ಯಾರ್ಥಿನಿಗೆ ಮೊಬೈಲ್ ನಂಬರ್ ಕೊಟ್ಟು ಅನುಚಿತ ವರ್ತನೆ : ಪಿಡಿಒ ವಿರುದ್ಧ ಪೋಕ್ಸೋ ಕೇಸ್ ದಾಖಲು

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮ ಪಂಚಾಯಿತಿ ಪಿಡಿಒ ವಿವೇಕ್ ತೇಜಸ್ವಿ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂರನೇ ತರಗತಿ ವಿದ್ಯಾರ್ಥಿನಿಗೆ ₹1,000 ಹಣ ನೀಡಿ, ತನ್ನ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾಗಿ ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಮನೆಯಲ್ಲೇ ಪೋಷಕರು ಇಲ್ಲದ ಸಮಯದಲ್ಲಿ ಫೋನ್ ಮಾಡುವಂತೆ ಅಧಿಕಾರಿ ಬಾಲಕಿಗೆ ತಿಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಬಾಲಕಿಯ ಪೋಷಕರು ಹಿರಿಯೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪಿಡಿಒ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: 1.86 ಲಕ್ಷ ರೂ. ವಂಚನೆ

ಕುಂದಾಪುರದ ಗುಲ್ವಾಡಿ ಗ್ರಾಮದ ಸೌಕೂರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗದ ಜಾಹೀರಾತು ನಂಬಿದ ಮಹಿಳೆಯೊಬ್ಬರು ಸೈಬರ್ ವಂಚಕರಿಂದ ₹1,86,570 ಕಳೆದುಕೊಂಡಿದ್ದಾರೆ. ರೇಣುಕಾ ಗಣೇಶ …

Leave a Reply

Your email address will not be published. Required fields are marked *