Breaking News

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತೊರ್ವ ಆರೋಪಿ ಸೆರೆ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಅ.28ರಂದು ಹಲ್ಲೆಗೊಳಗಾಗಿದ್ದ ಪ್ರದೀಪ್ ಪೂಜಾರಿ, ಅಜ್ಜರಕಾಡು ಆಸ್ಪತ್ರೆಯ ಬಾತ್‌ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗಾಗಲೇ ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *