Breaking News

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲಕಿಯನ್ನು ಪುಸಲಾಯಿಸಿ, ಚಾಕು ತೋರಿಸಿ ದೌರ್ಜನ್ಯ ಎಸಗಿದ್ದಲ್ಲದೆ, ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಬಾಲಕಿ ಹೊಟ್ಟೆನೋವಿನಿಂದ ಬಳಲಿದಾಗ ಆಕೆ ಒಂಬತ್ತು ತಿಂಗಳ ಗರ್ಭಿಣಿಯಾಗಿರುವ ವಿಚಾರ ಕುಟುಂಬಸ್ಥರಿಗೆ ತಿಳಿದುಬಂದಿದೆ. ವಿಷಯ ತಿಳಿದ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಗೆ ದಲಿತ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿವೆ.

Share News

About BigTv News

Check Also

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತೊರ್ವ ಆರೋಪಿ ಸೆರೆ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು …

Leave a Reply

Your email address will not be published. Required fields are marked *