Breaking News

ಅಪ್ರಾಪ್ತ ಬಾಲಕಿ ಗರ್ಭಿಣಿ: ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಚಾಮರಾಜನಗರ: ಯಳಂದೂರು ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಋತುಸ್ರಾವವಾಗದ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ತಾಯಿಯ ದೂರಿನ ಮೇರೆಗೆ ಯಳಂದೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ರಕ್ಷಿಸಿ ಹೆಚ್ಚಿನ ಆರೈಕೆ ಹಾಗೂ ರಕ್ಷಣೆಗಾಗಿ ಚಾಮರಾಜನಗರದ ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

Share News

About BigTv News

Check Also

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತೊರ್ವ ಆರೋಪಿ ಸೆರೆ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು …

Leave a Reply

Your email address will not be published. Required fields are marked *