Breaking News

ಕೊಲೆ ಆರೋಪಿಯನ್ನು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ವಿಜಯಪುರ: ಮುಂಡೇವಾಡಿ ಆಸ್ಪತ್ರೆ ಬಳಿ ನಡೆದಿದ್ದ ಯಾಸೀನ್ ಝುಬೇರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಮೀರ್ ಮುಲ್ಲಾನನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಅತಾಲಟ್ಟಿ ಗ್ರಾಮದ ಬಳಿ ಶನಿವಾರ ಮುಂಜಾನೆ ಬಂಧನ ಕಾರ್ಯಾಚರಣೆ ನಡೆದಿದ್ದು, ಈ ವೇಳೆ ಸಮೀರ್ ಪೊಲೀಸರ ಮೇಲೆ ಕಂಟ್ರಿ ಮೇಡ್ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅ.18ರಂದು ಉರೂಸ್ ಕಾರ್ಯಕ್ರಮದಲ್ಲಿ ಸೌಂಡ್ ಬಾಕ್ಸ್ ವಿಚಾರವಾಗಿ ಯಾಸೀನ್ ಹಾಗೂ ಸಮೀರ್ ತಂಡಗಳ ನಡುವೆ ಗಲಾಟೆ ನಡೆದಿತ್ತು. ಇದರ ದ್ವೇಷದಿಂದ ನ.5ರಂದು ಯಾಸೀನ್‌ನನ್ನು ಹತ್ಯೆ ಮಾಡಲಾಗಿತ್ತು. ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

Share News

About BigTv News

Check Also

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮತ್ತೊರ್ವ ಆರೋಪಿ ಸೆರೆ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು …

Leave a Reply

Your email address will not be published. Required fields are marked *