ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಹಣ ಡಬ್ಲಿಂಗ್ ಆಮಿಷವೊಡ್ಡಿ ₹2.68 ಕೋಟಿ ದರೋಡೆಗೆ ಸಂಚು ರೂಪಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಶಾಸಕ ರಮೇಶ ಜಾರಕಿಹೊಳಿ ಅವರ ಗನ್‌ಮ್ಯಾನ್ ಚಿದಾನಂದ ಕುರಬೇಟ್ ಪ್ರಮುಖ ಆರೋಪಿಯಾಗಿದ್ದಾನೆ. ಪ್ರತಿ ₹1 ಲಕ್ಷಕ್ಕೆ ₹30 ಸಾವಿರ ಹೆಚ್ಚುವರಿ ಹಣ ನೀಡುವುದಾಗಿ ನಂಬಿಸಿ ಕಲ್ಮೇಶ ರಂಗಾಪೂರ ಅವರಿಂದ ಹಣ ಸಂಗ್ರಹಿಸಲಾಗಿತ್ತು. ಅ.30ರಂದು ಶೆಡ್‌ನಲ್ಲಿ ಹಣ ಎಣಿಸುವ ನೆಪದಲ್ಲಿ ದರೋಡೆಗೆ ಯತ್ನಿಸಿದಾಗ ಕಲ್ಮೇಶ ತಂಡ ಆರೋಪಿಗಳನ್ನು ಹಿಡಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಾನಂದ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದ್ದು, ₹2.39 ಕೋಟಿ ವಶಪಡಿಸಿಕೊಳ್ಳಲಾಗಿದೆ. ಚಿದಾನಂದನನ್ನು ಎಸ್‌ಪಿ ಅಮಾನತುಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
