Breaking News

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ ಸಂತೋಷ್ ಸಿಂಗ್ ಚೌಹಾಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರ ಸಂಜೆ ಈ ಘಟನೆ ನಡೆದಿದೆ. ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು ವ್ಯಕ್ತಿಯನ್ನು ಸುಮಾರು 25ರಿಂದ 30 ಮೀಟರ್ ಎಳೆದೊಯ್ದು ರಸ್ತೆ ರೇಲಿಂಗ್‌ಗೆ ಗುದ್ದಿ ನಿಂತಿದೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಮೃತರ ಕುಟುಂಬದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರಿನ ನಂಬರ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪರಾರಿಯಾದ ಮಹಿಳೆಯರಿಗಾಗಿ ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಲಕ್ಷಕ್ಕೆ ₹30 ಸಾವಿರ ಆಮಿಷವೊಡ್ಡಿ ₹2.68 ಕೋಟಿ ದೋಚಲು ಪ್ಲಾನ್! ಮಾಜಿ ಸಚಿವರ ಗನ್‌ಮ್ಯಾನ್ ಹಾಕಿದ್ದ ಸ್ಕೆಚ್ ಗೆ ಬೆಚ್ಚಿಬಿದ್ದ ಬೆಳಗಾವಿ!

ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಹಣ ಡಬ್ಲಿಂಗ್ ಆಮಿಷವೊಡ್ಡಿ ₹2.68 ಕೋಟಿ ದರೋಡೆಗೆ ಸಂಚು ರೂಪಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಶಾಸಕ …

Leave a Reply

Your email address will not be published. Required fields are marked *