Breaking News

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಆಕ್ರೋಶಗೊಂಡ ಗ್ರಾಮಸ್ಥರು ಶನಿವಾರ ರಾತ್ರಿ ಆರೋಪಿಯ ಮನೆ ಧ್ವಂಸಗೊಳಿಸಿದ್ದಾರೆ. ವಿಷಯ ತಿಳಿದು ಡಿವೈಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಎಸ್ಪಿ ದೀಪನ್ ಎಂ.ಎನ್. ಕೂಡ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನು ಮನೆ ಧ್ವಂಸ ಮಾಡಿದವರ ವಿರುದ್ಧ ಆರೋಪಿಯ ಪುತ್ರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share News

About BigTv News

Check Also

‘ಮುಂದೆ ಕಳ್ಳರಿದ್ದಾರೆ, ಆಭರಣ ಕೊಡಿ’- ಪೊಲೀಸರ ಸೋಗಿನಲ್ಲಿ ಬೈಕ್ ತಡೆದು ಚಿನ್ನ ದೋಚಿದ ಖದೀಮರು!

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ವೈಎಸ್‌ಆರ್ ಶಾಲೆ ಬಳಿ ನಕಲಿ ಪೊಲೀಸರ ಸೋಗಿನಲ್ಲಿ ಬಂದ ಇಬ್ಬರು ಖದೀಮರು ಬೈಕ್ ಸವಾರನನ್ನು …

Leave a Reply

Your email address will not be published. Required fields are marked *