ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿ ಸೈಬರ್ ವಂಚಕರು 65 ವರ್ಷದ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಿಗೆ ₹1.19 ಕೋಟಿ ವಂಚಿಸಿದ್ದಾರೆ. ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್ ಗ್ರೂಪ್‌ಗಳ ಮೂಲಕ ಹೂಡಿಕೆ ಸಲಹೆ ನೀಡಿದ್ದ ವಂಚಕರು, ಲಾಭ ಗಳಿಸಿದ ನಕಲಿ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ನಂಬಿಕೆ ಮೂಡಿಸಿದ್ದರು. ಬಳಿಕ ಮೂರು ನಕಲಿ ಟ್ರೇಡಿಂಗ್ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಸಿ, ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದರು. ಒಟ್ಟು ₹1,19,12,000 ಹಣ ವರ್ಗಾಯಿಸಿದ ಬಳಿಕ ಹಿಂಪಡೆಯಲು ಯತ್ನಿಸಿದಾಗ ತೆರಿಗೆ ಹಾಗೂ ಶುಲ್ಕದ ಹೆಸರಿನಲ್ಲಿ ಮತ್ತಷ್ಟು ಹಣ ಕೇಳಿದ್ದಾರೆ. ಆಗ ವಂಚನೆ ಅರಿತ ಪ್ರಾಧ್ಯಾಪಕರು ನ.4ರಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
