Breaking News

ಪೆಟ್ರೋಲ್ ಬಂಕ್ ಮಾಲಕರ ಸಂಬಂಧಿ ಮೇಲೆ ಐವರಿಂದ ಹಲ್ಲೆ; ಪ್ರಕರಣ ದಾಖಲು

ಉಡುಪಿ: ಗುಂಡಿಬೈಲ್‌ನ ಪೆಟ್ರೋಲ್ ಬಂಕ್‌ನಲ್ಲಿ ಮದ್ಯಪಾನ ಮಾಡದಂತೆ ಎಚ್ಚರಿಸಿದ್ದಕ್ಕೆ ಬಂಕ್ ಮಾಲಕರ ಸಂಬಂಧಿ ಆಶಿಶ್ ಶೆಟ್ಟಿ (44) ಮೇಲೆ ಐವರು ಹಲ್ಲೆ ನಡೆಸಿದ್ದಾರೆ. ಖಾಸಗಿ ಬಸ್ ಚಾಲಕ ಆಕಾಶ್ ಬಂಕ್ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದುದನ್ನು ಆಶಿಶ್ ಪ್ರಶ್ನಿಸಿದ್ದರು. ಇದರಿಂದ ಮಾತಿನ ಚಕಮಕಿ ನಡೆದಿದ್ದು, ಸ್ವಲ್ಪ ಸಮಯದ ಬಳಿಕ ನಾಲ್ವರು ಕಾರಿನಲ್ಲಿ ಹಾಗೂ ಓರ್ವ ಲಾರಿಯಲ್ಲಿ ಬಂಕ್‌ಗೆ ಮರಳಿದ್ದಾರೆ. ಬಳಿಕ ಆಶಿಶ್ ಮೇಲೆ ಹಲ್ಲೆ ನಡೆಸಿ, ಪುನೀತ್ ಎಂಬಾತ ಕಡಗದಿಂದ ತಲೆಗೆ ಹೊಡೆದಿದ್ದಾನೆ. ಗಾಯಗೊಂಡ ಆಶಿಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *