ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಊರಿಗೆ ತೆರಳಿ ವಾಪಸ್ ಬಂದ ಚಾಲಕ ಕಾರು ನಿಲ್ಲಿಸಿ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಈ ಅವಘಡ ಸಂಭವಿಸಿದೆ. ಕಾರಿನಿಂದ ಹೊಗೆ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಕಾರು ಸಂಪೂರ್ಣ ಸುಟ್ಟುಹೋಗಿತ್ತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿಗೆ ಬೆಂಕಿ ತಗುಲಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

