Breaking News

ಅನೈತಿಕ ಸಂಬಂಧ ಪ್ರಶ್ನಿಸಿದ ಮಗನನ್ನು ಕೊ*ಲೆ ಮಾಡಿಸಿದ ಹೆತ್ತ ತಾಯಿ!

ಬೆಳಗಾವಿಯಲ್ಲಿ ತಾಯಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ 24 ವರ್ಷದ ಮಗನನ್ನು ತಂಪು ಪಾನೀಯದಲ್ಲಿ ನಿದ್ದೆ ಮಾತ್ರೆ ಬೆರೆಸಿ ಕುಡಿಸಿ, ಬಳಿಕ ಶಾಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ತಾಯಿ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ನವೆಂಬರ್ 3ರಂದು ಕೆಎಲ್‌ಇ ಛತ್ರಿ ಸಮೀಪದ ಗಟಾರದಲ್ಲಿ ವಿಜಯ ನಾರಾಯಣ (24) ಎಂಬಾತನ ಶವ ಪತ್ತೆಯಾಗಿತ್ತು. ತನಿಖೆ ವೇಳೆ ತಾಯಿ ಮೀನಾ ನಾರಾಯಣ, ತನ್ನ ಪ್ರಿಯಕರ ರಾಕೇಶನ ಜೊತೆ ಸೇರಿ ಮಗನ ಕೊಲೆಗೆ ಸಂಚು ರೂಪಿಸಿರುವುದು ಬಯಲಾಗಿದೆ. ರಾಕೇಶ ಹಾಗೂ ಸಹಚರರು ವಿಜಯನಿಗೆ ನಿದ್ದೆ ಮಾತ್ರೆ ಬೆರೆಸಿದ ತಂಪು ಪಾನೀಯ ಕುಡಿಸಿ, ಪ್ರಜ್ಞೆ ತಪ್ಪಿದ ಬಳಿಕ ಶಾಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಗಟಾರಕ್ಕೆ ಎಸೆದು ಪರಾರಿಯಾಗಿದ್ದರು. ಪ್ರಕರಣವನ್ನು ಮಾಳಮಾರುತಿ ಠಾಣೆ ಪೊಲೀಸರು ಭೇದಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *