ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. ಮಾಹಿತಿ ತಿಳಿದ ತಕ್ಷಣ ಬಾಂಬ್ ಪತ್ತೆ ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಚೇರಿ ಆವರಣದಲ್ಲಿ ತಪಾಸಣೆ ನಡೆಸಿದರು. ಆದರೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಈ ಸಂಬಂಧ ಪಾಲಿಕೆ ಅಧಿಕಾರಿಗಳು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
