Breaking News

ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಮಂಗಳೂರಿನ ಧರ್ಮಗುರು ವಿರುದ್ಧ ಮತ್ತೊಂದು ಕೇಸ್

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. 13 ವರ್ಷದ ಬಾಲಕನಿಗೆ 2026ರ ಮೇ 13ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್‌ಎಸ್ ಹಾಗೂ ಪೋಕ್ಸೊ ಕಾಯ್ದೆಯಡಿ ತನಿಖೆ ಆರಂಭಿಸಲಾಗಿದೆ. ಇದಕ್ಕೂ ಮೊದಲು 14 ವರ್ಷದ ಬಾಲಕನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಟೋಬರ್ 15ರಂದು ಪ್ರಕರಣ ದಾಖಲಾಗಿತ್ತು. ಬಂಧನಕ್ಕೊಳಗಾಗಿದ್ದ ಆರೋಪಿಗೆ ಬಳಿಕ ಜಾಮೀನು ದೊರೆತಿತ್ತು. ಇದೀಗ ಎರಡನೇ ಪ್ರಕರಣದ ತನಿಖೆಯನ್ನು ಎಸಿಪಿ ಅವರಿಗೆ ವಹಿಸಲಾಗಿದೆ.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *