Breaking News

ವಿಜಯನಗರ: ರುಬ್ಬುಗಲ್ಲಿನಿಂದ ಯುವಕನ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿ ನಾಲ್ಕನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಮಂಗಳವಾರ ನಸುಕಿನಲ್ಲಿ ಕಿರಣ್ ಕುಮಾರ್ ಅಲಿಯಾಸ್ ಚುಮ್ಮಿ (25) ಎಂಬ ಯುವಕನನ್ನು ರುಬ್ಬುಗಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳ ಆರಂಭವಾಗಿದ್ದು, ಈ ವೇಳೆ ಕಿರಣ್‌ನ ತಲೆಯ ಹಿಂಭಾಗಕ್ಕೆ ರುಬ್ಬುಗಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅದೇ ಓಣಿಯ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಎಸ್ಪಿ ಎಸ್. ಜಾಹ್ನವಿ ತಿಳಿಸಿದ್ದಾರೆ. ಮೃತ ಕಿರಣ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳಲ್ಲಿ ಕರಿಯಪ್ಪ ಎಂಬಾತನ ವಿರುದ್ಧವೂ ಪೊಲೀಸ್ ಠಾಣೆಯಲ್ಲಿ ಪ್ರಕರಣವಿತ್ತು ಎಂದು ಮೂಲಗಳು ತಿಳಿಸಿವೆ. ಈ ಕುರಿತು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

1.15 ಕೋಟಿ ಹವಾಲಾ ಹಣ ದರೋಡೆ ಪ್ರಕರಣ: ಕಾನ್ಸ್‌ಟೇಬಲ್‌ ಅರೆಸ್ಟ್‌

ಕಾರವಾರ: 1.15 ಕೋಟಿ ರೂ. ಹವಾಲಾ ಹಣ ದರೋಡೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಟ್ರಾಫಿಕ್ ಪೊಲೀಸ್ ಠಾಣೆಯ …

Leave a Reply

Your email address will not be published. Required fields are marked *