ಕಾರವಾರ: 1.15 ಕೋಟಿ ರೂ. ಹವಾಲಾ ಹಣ ದರೋಡೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಟ್ರಾಫಿಕ್ ಪೊಲೀಸ್ ಠಾಣೆಯ ಪೇದೆ ಶ್ರೀಶೈಲ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸುತ್ತಿದ್ದ ಹವಾಲಾ ಹಣ ದೋಚಲು ಸತ್ಯನಾರಾಯಣ ಎಂಬವರನ್ನು ಅಪಹರಿಸಿ ಹಣ ದರೋಡೆ ಮಾಡಲಾಗಿತ್ತು. ತನಿಖೆ ವೇಳೆ ಕಾರವಾರದ ಪೊಲೀಸ್ ಪೇದೆ ಶ್ರೀಶೈಲ್ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದ್ದು, ಸ್ಥಳೀಯ ಯುವಕರ ನೆರವಿನಿಂದ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಗಣೇಶ ಕೋಳಂಕರ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಪೇದೆ ಶ್ರೀಶೈಲ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅಮಾನತುಗೊಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
