Breaking News

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಕಿರಣ್ ಕುಮಾರ್ (25) ಎಂಬ ಯುವಕನನ್ನು ರುಬ್ಬುಗಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಕರಿಯಪ್ಪ (30) ಎಂಬಾತ ಕಿರಣ್ ಜೊತೆ ಮಾತಿನ ಚಕಮಕಿ ನಡೆಸಿ, ಬಳಿಕ ರುಬ್ಬುಗಲ್ಲಿನಿಂದ ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕರಿಯಪ್ಪ ಹಾಗೂ ಕಿರಣ್ ಇಬ್ಬರೂ ಪೊಲೀಸರ ಎಂಒಬಿ ಪಟ್ಟಿಯಲ್ಲಿದ್ದು, ಇಬ್ಬರ ವಿರುದ್ಧವೂ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಎಸ್ಪಿ ಎಸ್. ಜಾಹ್ನವಿ ಹಾಗೂ ಡಿವೈಎಸ್ಪಿ ಮುರಳೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ವಿಜಯಪುರ: ನಗರದ ನಾಲಬಂದ್ ಚೌಕ್‌ನಲ್ಲಿರುವ ಅಂಗಡಿಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ. ಸೋಮವಾರ …

Leave a Reply

Your email address will not be published. Required fields are marked *