ಬೆಂಗಳೂರು: ಪ್ರೀತಿಸಿ ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಕಾವ್ಯ (22) ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಗ್ರಾಮದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ, ಹನುಮಂತರಾಜು ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆಯಾದ ಬಳಿಕ ಪತಿ ಹಾಗೂ ಅತ್ತೆ-ಮಾವ ಸೇರಿದಂತೆ ಕುಟುಂಬದವರು ₹5 ಲಕ್ಷ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ಕಾವ್ಯ ಪೋಷಕರು ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುವತಿಯ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಪತಿ ಕುಟುಂಬದವರು ಮನೆ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
