Breaking News

ಮಣಿಪಾಲ: ರಸ್ತೆಯಲ್ಲೇ ಗುಂಪು ಕಟ್ಟಿ ಮಾರಾಮಾರಿ; ವೈರಲ್ ವಿಡಿಯೊ ಆಧರಿಸಿ 11 ಯುವಕರ ವಿರುದ್ಧ ಪ್ರಕರಣ ದಾಖಲು

ಮಣಿಪಾಲದ ಈಶ್ವರನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 169(A) ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 11 ಯುವಕರು ಸೇರಿದಂತೆ ಇತರರ ವಿರುದ್ಧ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕರು ರಸ್ತೆಯಲ್ಲಿ ಬೈಕ್‌ಗಳನ್ನು ನಿಲ್ಲಿಸಿಕೊಂಡು ಗುಂಪು ಕಟ್ಟಿಕೊಂಡು ಜಗಳವಾಡಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ವೈರಲ್ ವಿಡಿಯೋ ಆಧರಿಸಿ ಯುವಕರ ಗುರುತು ಪತ್ತೆಹಚ್ಚಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ಮಾಡುತ್ತಿದ್ದ ಯುವಕ: ಜೋಳಿಗೆಯಲ್ಲಿ ಸಾವಿರಾರು ರೂ. ಪತ್ತೆ, ಸಾರ್ವಜನಿಕರಿಂದ ಧರ್ಮದೇಟು!

ತುಮಕೂರಿನ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ವಿಶೇಷಚೇತನನಂತೆ ನಟಿಸಿ ಭಿಕ್ಷೆ ಬೇಡುತ್ತಿದ್ದ ಮಹಾರಾಷ್ಟ್ರ ಮೂಲದ ಸನ್ನಿ ಎಂಬ ಯುವಕನನ್ನು ಸಾರ್ವಜನಿಕರು ಹಿಡಿದಿದ್ದಾರೆ. …

Leave a Reply

Your email address will not be published. Required fields are marked *