ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಕಿಡಿ ತಗುಲಿ ಪ್ಲಾಸ್ಟಿಕ್ ಸ್ಕ್ರಾಪ್ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಕಸ್ತೂರಿಬಾ ನಗರದ ರುದ್ರಪ್ಪ ಗಾರ್ಡನ್ ಬಳಿ ನಡೆದಿದೆ. ಪ್ಲಾಸ್ಟಿಕ್ ಸ್ಕ್ರಾಪ್ ತುಂಬಿದ್ದ ಗೋಡೌನ್‌ನಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿ ಸಂಪೂರ್ಣ ಗೋಡೌನ್ ಹೊತ್ತಿ ಉರಿದಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ. ಮಾಹಿತಿ ತಿಳಿದು ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೊಂದು ವಾಹನವನ್ನು ಕರೆಸಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
