ಬೆಂಗಳೂರು: ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಪತಿ ಮದ್ಯದ ನಶೆಯಲ್ಲಿ ಪ್ರತಿದಿನ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಪತ್ನಿಯೊಬ್ಬಳು, ಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಲಕ್ಷ್ಮೀಪುರದಲ್ಲಿ ನಡೆದಿದೆ. ರಾಜಶೇಖರ್ (44) ಕೊಲೆಯಾದ ವ್ಯಕ್ತಿ. ಪತ್ನಿ ಮಾಲಾಶ್ರೀ (35) ಆರೋಪಿ. ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಪತಿ ಮದ್ಯ ಸೇವಿಸಿ ಬಂದು ಜಗಳವಾಡಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಮಾಲಾಶ್ರೀ ಅಡುಗೆ ಮನೆಯ ಚಾಕುವಿನಿಂದ ಪತಿಯ ಎದೆಗೆ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದ ರಾಜಶೇಖರ್ ಮೃತಪಟ್ಟಿದ್ದು, ಕೆಂಪೇಗೌಡ ನಗರ ಠಾಣೆ ಪೊಲೀಸರು ಮಾಲಾಶ್ರೀಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
