Breaking News

ಅಪ್ರಾಪ್ತ ವಯಸ್ಕ ಬಾಲಕಿಗೆ ನ್ಯಾಯಕ್ಕೆ ಆಗ್ರಹ: ಮುಂಡಗೋಡ ಸಂಪೂರ್ಣ ಬಂದ್

ಮುಂಡಗೋಡ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ಮುಂಡಗೋಡ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿ ಸಾರ್ವಜನಿಕರು ಬೆಂಬಲ ಸೂಚಿಸಿದರು. ಬೆಳಿಗ್ಗೆ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಹಿಳೆಯರು, ವಿದ್ಯಾರ್ಥಿನಿಯರು, ವಕೀಲರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ ಬಾಲಕಿಗೆ ಶೀಘ್ರ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಎಸ್‌ಪಿ ದೀಪನ್ ಎಂ.ಎನ್. ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬಂದ್ ಶಾಂತಿಯುತವಾಗಿ ನಡೆಯಿತು.

Share News

About BigTv News

Check Also

ಮಕ್ಕಳಾಗಿಲ್ಲ ಅಂತ ಚೇಡಿಸುತ್ತಿದ್ದ ಗಂಡನನ್ನೇ ಚುಚ್ಚಿ ಕೊಂದ ಪತ್ನಿ!

ಬೆಂಗಳೂರು: ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಪತಿ ಮದ್ಯದ ನಶೆಯಲ್ಲಿ ಪ್ರತಿದಿನ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಪತ್ನಿಯೊಬ್ಬಳು, ಪತಿಯನ್ನು ಚಾಕುವಿನಿಂದ ಇರಿದು …

Leave a Reply

Your email address will not be published. Required fields are marked *