ಬೆಂಗಳೂರು: ನಗರದಲ್ಲಿ ಪೊಲೀಸರು ನಡೆಸಿದ ವಿವಿಧ ಕಾರ್ಯಾಚರಣೆಗಳಲ್ಲಿ ₹6.30 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, 34 ಆರೋಪಿಗಳನ್ನು ಬಂಧಿಸಿದ್ದಾರೆ. 5.519 ಕೆಜಿ ಎಂಡಿಎಂಎ, 46.486 ಕೆಜಿ ಗಾಂಜಾ, 72.82 ಗ್ರಾಂ ಕೊಕೇನ್ ಹಾಗೂ ಹ್ಯಾಶಿಶ್ ಆಯಿಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರಲ್ಲಿ ಇಬ್ಬರು ವಿದೇಶಿಯರು, 9 ಮಂದಿ ಹೊರರಾಜ್ಯದವರು ಹಾಗೂ 23 ಸ್ಥಳೀಯರು ಸೇರಿದ್ದಾರೆ. ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದಾಗಿ ಆರೋಪಿಗಳು ಬಾಯಿಬಿಟ್ಟಿದ್ದಾರೆ. ಹೆಬ್ಬಾಳ, ಕೋರಮಂಗಲ, ಗೋವಿಂದಪುರ, ಬೇಗೂರು ಹಾಗೂ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಬಂಧಿತರೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಡ್ರಗ್ಸ್ ಪೂರೈಕೆಯ ಮೂಲ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

