Breaking News

ಪೂಜೆ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಅಕ್ಕ ಪಡೆಯಿಂದ ರಹಸ್ಯ ಕಾರ್ಯಾಚರಣೆ: 11 ಆರೋಪಿಗಳು ಅರೆಸ್ಟ್

ಬಳ್ಳಾರಿಯಲ್ಲಿ ಲಕ್ಷ್ಮೀ ಪೂಜೆ ಹೆಸರಿನಲ್ಲಿ ಬಡ ಹಾಗೂ ಮೂಢನಂಬಿಕೆ ನಂಬುವ ಯುವತಿಯರನ್ನು ವಂಚಿಸಿ, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದ ಅಂತರರಾಜ್ಯ ಗ್ಯಾಂಗ್‌ ಅನ್ನು ಅಕ್ಕ ಪಡೆ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ 11 ಆರೋಪಿಗಳನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಹಣದ ಮಳೆ ಸುರಿಯುತ್ತದೆ ಎಂದು ನಂಬಿಸಿ ಯುವತಿಯರನ್ನು ಪೂಜೆಗೆ ಕರೆಸಿಕೊಳ್ಳುತ್ತಿದ್ದ ಆರೋಪಿಗಳು, ಅವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಬಳಿಕ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು. ಬಳ್ಳಾರಿ, ಮೈಸೂರು, ಚಿಕ್ಕಮಗಳೂರು ಹಾಗೂ ಆಂಧ್ರಪ್ರದೇಶದಲ್ಲಿ ಈ ಜಾಲ ಸಕ್ರಿಯವಾಗಿತ್ತು. ದಂಧೆಯ ಪ್ರಮುಖ ಆರೋಪಿ ಎನ್ನಲಾದ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *