Breaking News

ದೀಪಾವಳಿ ಬಾಡೂಟಕ್ಕೆ ಕಡವೆ-ಕಾಡುಕುರಿ ಬೇಟೆ; ಓರ್ವನ ಬಂಧನ, ಮೂವರು ಪರಾರಿ!

ಚಿಕ್ಕಮಗಳೂರು: ದೀಪಾವಳಿ ಹಬ್ಬದ ಬಾಡೂಟಕ್ಕಾಗಿ ಕಡವೆ ಹಾಗೂ ಕಾಡುಕುರಿಯನ್ನು ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಟ್ಟಿಗೆಹಾರ ಸಮೀಪದ ಬಿನ್ನಡಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಿನ್ನಡಿ ಗ್ರಾಮದ ರಮೇಶ್ ಬಂಧಿತ ಆರೋಪಿ. ರಮೇಶ್ ಮನೆಯಲ್ಲಿ ನಾಲ್ವರು ಕುಳಿತು ಬೇಟೆಯಾಡಿದ ಪ್ರಾಣಿಗಳ ಮಾಂಸ ಕತ್ತರಿಸುತ್ತಿದ್ದಾಗ ಅರಣ್ಯ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಮಹೇಂದ್ರ, ಪ್ರಕಾಶ್ ಹಾಗೂ ಮಲ್ಲಯ್ಯ ಪರಾರಿಯಾಗಿದ್ದಾರೆ. ದಾಳಿಯ ವೇಳೆ ಎರಡು ನಾಡ ಬಂದೂಕುಗಳು ಹಾಗೂ ವನ್ಯಜೀವಿ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಆರೋಪಿಗಳಿಗಾಗಿ ಶೋಧ ಮುಂದುವರಿದಿದ್ದು, ನಾಲ್ವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *