ಬಳ್ಳಾರಿ: ಬಡ ಕುಟುಂಬಗಳ ಯುವತಿಯರಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ಜಾಲಕ್ಕೆ ಸೆಳೆಯುತ್ತಿದ್ದ ಸಂಘಟಿತ ಜಾಲವನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಒಟ್ಟು 16 ಆರೋಪಿಗಳನ್ನು ಗುರುತಿಸಿದ್ದು, ಈ ಪೈಕಿ 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ಯುವತಿಯರ ಫೋಟೊ ಹಾಗೂ ವೈಯಕ್ತಿಕ ವಿವರಗಳನ್ನು ಪಡೆದು ಮೂರು ಹಂತಗಳಲ್ಲಿ ಆಯ್ಕೆ ಮಾಡುತ್ತಿದ್ದರು. ಬಳಿಕ ‘ಲಕ್ಷ್ಮಿ ಪೂಜೆ’ ಹೆಸರಿನಲ್ಲಿ ಹಣದ ಆಮಿಷವೊಡ್ಡಿ ಜಾಲಕ್ಕೆ ಸೆಳೆಯುತ್ತಿದ್ದರು. ಅಪ್ರಾಪ್ತ ಬಾಲಕಿಯರ ಫೋಟೊಗಳೂ ಪತ್ತೆಯಾಗಿವೆ. ಅಕ್ಕಪಡೆಯ ಮಹಿಳಾ ಪೊಲೀಸರು 45 ದಿನಗಳ ಕಾಲ ರಹಸ್ಯ ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚಿದ್ದಾರೆ. ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆ ಹಾಗೂ ಹೊರರಾಜ್ಯಗಳೊಂದಿಗೆ ಜಾಲ ಸಂಪರ್ಕ ಹೊಂದಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
