ಹೈದರಾಬಾದ್ ಮತ್ತು ಸಿಕಂದರಾಬಾದ್ನ ಐದು ಕಡೆಗಳಲ್ಲಿ ಅಕ್ರಮ ಅಂಡಾಣು ಸಂಗ್ರಹ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿ 43 ಮಹಿಳೆಯರನ್ನು ರಕ್ಷಿಸಿದ್ದಾರೆ. ಬಡ ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಅಂಡಾಣು ಸಂಗ್ರಹ ಮಾಡುತ್ತಿದ್ದ ಜಾಲವನ್ನು ಮಲ್ಕಾಜ್ಗಿರಿ ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಿಳೆಯರಿಗೆ ₹30 ಸಾವಿರದಿಂದ ₹50 ಸಾವಿರದವರೆಗೆ ಹಣ ನೀಡುವುದಾಗಿ ನಂಬಿಸಿ ಹಾಸ್ಟೆಲ್ಗಳಲ್ಲಿ ಇರಿಸಲಾಗಿತ್ತು. ಈ ಸಂಬಂಧ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಈ ಜಾಲವು ಹಲವು ರಾಜ್ಯಗಳಿಗೆ ವ್ಯಾಪಿಸಿದ್ದು, ಕಳೆದ ಎರಡು ವರ್ಷಗಳಿಂದ ಸಕ್ರಿಯವಾಗಿರುವ ಶಂಕೆಯಿದೆ. ನಗರದ 23 ಐವಿಎಫ್ ಕೇಂದ್ರಗಳ ಸಂಪರ್ಕದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

