Breaking News

ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಗೌಡ (39) ಅವರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಶುಕ್ರವಾರ ಬೆಳಗ್ಗೆ ಕುಟುಂಬದವರೊಂದಿಗೆ ಬಂದಿದ್ದ ಚರಣ್ ಗೌಡ ಅವರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತೀವ್ರ ಹಲ್ಲೆಯಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಳೆಯ ದ್ವೇಷ ಅಥವಾ ರಿಯಲ್ ಎಸ್ಟೇಟ್ ಉದ್ಯಮದ ವೈಷಮ್ಯ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಯಲಹಂಕ ನ್ಯೂಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರು | ವಕೀಲ ಮಂಜುನಾಥ್ ಹತ್ಯೆ ಪ್ರಕರಣ: ಶೂಟರ್‌ಗೆ ಶೋಧ

ಬೆಂಗಳೂರು: ಪಟ್ಟಂದೂರು ಅಗ್ರಹಾರದಲ್ಲಿ ವಕೀಲ ಮಂಜುನಾಥ್ ಅವರನ್ನು ಗುಂಡಿಟ್ಟು ಕೊಲೆ ಮಾಡಿದ ಪ್ರಕರಣದಲ್ಲಿ ಬಿಹಾರ ಮೂಲದ ಆರೋಪಿ ಅಮಿತ್ ಕುಮಾರ್ …

Leave a Reply

Your email address will not be published. Required fields are marked *