Breaking News

ಪತ್ನಿಯಿದ್ದರೂ ಎರಡು ಮಕ್ಕಳ ತಾಯಿಯನ್ನು ಗುಟ್ಟಾಗಿ ಮದುವೆಯಾದ ಪತಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ತಿಳಿಯದಂತೆ ಇಬ್ಬರು ಮಕ್ಕಳ ತಾಯಿಯನ್ನು ಎರಡನೇ ಮದುವೆಯಾಗಿರುವ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಮೊಹಮ್ಮದ್ ಸದಾಕತ್ ಅಲಿ ವಿರುದ್ಧ ಪತ್ನಿ ದೂರು ನೀಡಿದ್ದಾರೆ. 10 ವರ್ಷಗಳ ಹಿಂದೆ ಪರಿಚಯವಾಗಿ ಪ್ರೀತಿಸುತ್ತಿದ್ದ ಇಬ್ಬರೂ, ಐದು ವರ್ಷಗಳ ಹಿಂದೆ ಕಾನೂನುಬದ್ಧವಾಗಿ ಮದುವೆಯಾಗಿದ್ದರು. ಆದರೆ ಕಳೆದ ಒಂದು ತಿಂಗಳಿಂದ ಪತಿ ಮನೆಗೆ ಬರುವುದನ್ನು ನಿಲ್ಲಿಸಿದ್ದ ಎನ್ನಲಾಗಿದೆ. ಪ್ರಶ್ನಿಸಿದಾಗ ಮತ್ತೊಂದು ಮದುವೆಯಾಗಿರುವುದಾಗಿ ಪತಿ ತಿಳಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ. ಹೆಣ್ಣೂರು ಠಾಣೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ, ಇದೀಗ ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಿದ್ದಾರೆ.

Share News

About BigTv News

Check Also

ಕಡಬದ ವ್ಯಾಪಾರಿಗೆ ಹಣಕ್ಕೆ ಬೇಡಿಕೆ, ಜೀವ ಬೆದರಿಕೆ

ಕಡಬ: ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದಡಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟ್ರುಪ್ಪಾಡಿ ಗ್ರಾಮದ …

Leave a Reply

Your email address will not be published. Required fields are marked *