ದಾವಣಗೆರೆ: ಕುಡಿಯಲು ಹಣ ನೀಡದ ಕಾರಣಕ್ಕೆ ಪುತ್ರನೊಬ್ಬ ದೊಣ್ಣೆಯಿಂದ ಹೊಡೆದು ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಚೆನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ಮುಳ್ಳಮ್ಮ ಕೊಲೆಯಾದ ತಾಯಿ. ಸ್ನೇಹಿತನ ಕೊಲೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆರೋಪಿ ಹನುಮಂತಪ್ಪ ಎರಡು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ. ಬಳಿಕ ಕುಡಿಯಲು ಹಣ ನೀಡುವಂತೆ ತಾಯಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಹಣ ನೀಡದಿದ್ದಾಗ ದೊಣ್ಣೆಯಿಂದ ಹೊಡೆದು ತಾಯಿಯನ್ನು ಕೊಲೆ ಮಾಡಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

