ವಿಜಯಪುರ: ಜಮೀನು ಲೀಸ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದಲ್ಲಿ ನಡೆದಿದೆ. ಹನುಮವ್ವ ಮೇಟಿ ಅವರಿಗೆ ಸೇರಿದ 10 ಎಕರೆ ಜಮೀನನ್ನು ಸಾಲೋಟಗಿ ಕುಟುಂಬದವರು ಲೀಸ್‌ಗೆ ಪಡೆದು ಕಬ್ಬು ಬೆಳೆದಿದ್ದರು. ಜಮೀನಿನ ಪಾಲಿನ ವಿಚಾರವಾಗಿ ಹನುಮವ್ವ ಅವರ ಸಂಬಂಧಿಕರು ಆಕ್ಷೇಪ ವ್ಯಕ್ತಪಡಿಸಿದ್ದು, ಕಬ್ಬು ಕಟಾವು ಮಾಡಲು ತೆರಳಿದಾಗ ಎರಡೂ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಕಲ್ಲು, ಕಟ್ಟಿಗೆ ಹಾಗೂ ಬಡಿಗೆಗಳಿಂದ ಹಲ್ಲೆ ನಡೆದಿದ್ದು, ಸಾಲೋಟಗಿ ಕುಟುಂಬದ ಹನುಮಂತ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತಿಬ್ಬರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಹಾರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
