ಮಂಡ್ಯ: ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಎರಡೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಉಪ ವ್ಯವಸ್ಥಾಪಕ ಟಿ. ರಾಮಕೃಷ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಮದ್ದೂರು ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದ ವೇಳೆ ಸಿಪಿಐ ನವೀನ್ ಕುಮಾರ್ ನೇತೃತ್ವದ ತಂಡ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೈಕೋರ್ಟ್‌ನಲ್ಲೂ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ರಾಮಕೃಷ್ಣ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಹಾಲಿನ ಪುಡಿ ಚೀಲಗಳಲ್ಲಿ ಕಲಬೆರಕೆ ಹಾಗೂ ದಾಸ್ತಾನು ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಆಗಸ್ಟ್ 30ರಂದು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news
