Breaking News

ಇ-ಖಾತಾ ಅಕ್ರಮ: ಸಹಾಯಕ ಆಯುಕ್ತ ಸೇರಿ 31 ಜನರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ಇ-ಖಾತಾ ವಿತರಿಸಿದ ಆರೋಪದ ಮೇಲೆ ಸಹಾಯಕ ಆಯುಕ್ತ ಬಸವರಾಜ್ ಎನ್. ಮಾಘಿ ಸೇರಿದಂತೆ 31 ಜನರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ಯಾಂಕ್‌ಗಳಿಗೆ ಮಾತ್ರ ಸೀಮಿತವಾಗಿದ್ದ ವಿಶೇಷ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಅನರ್ಹ ನಿವೇಶನ ಹಾಗೂ ಕಟ್ಟಡಗಳಿಗೆ ಇ-ಖಾತಾ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಗತ್ಯ ದಾಖಲೆಗಳ ಬದಲಿಗೆ ಸಾಮಾನ್ಯ ಮಾರಾಟ ಪತ್ರ ಮತ್ತು ಜಂಟಿ ಅಭಿವೃದ್ಧಿ ಒಪ್ಪಂದಗಳನ್ನು ಅಪ್‌ಲೋಡ್ ಮಾಡಿ ಖಾತಾ ಮಂಜೂರು ಮಾಡಲಾಗಿದೆ ಎನ್ನಲಾಗಿದೆ. ಜನವರಿ 29ರಿಂದ ಜೂನ್ 19, 2026ರವರೆಗೆ ಹೊರಮಾವು ಮತ್ತು ಕೆ.ಆರ್. ಪುರಂ ವ್ಯಾಪ್ತಿಯ 98 ಅನರ್ಹ ಆಸ್ತಿಗಳಿಗೆ ಇ-ಖಾತಾ ನೀಡಿರುವ ಆರೋಪವಿದೆ. ಕ್ರಿಮಿನಲ್ ಸಂಚು, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮನ್‌ಮುಲ್‌ ಹಾಲಿನಪುಡಿ ಕಲಬೆರಕೆ ಪ್ರಕರಣ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಮಂಡ್ಯ: ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಎರಡೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಉಪ ವ್ಯವಸ್ಥಾಪಕ ಟಿ. ರಾಮಕೃಷ್ಣ ಅವರನ್ನು ಪೊಲೀಸರು …

Leave a Reply

Your email address will not be published. Required fields are marked *