Breaking News

ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಕೇಸ್ – ಆರೋಪಿಗಳ ಸುಳಿವು ಪತ್ತೆಹಚ್ಚಿದ ಪೊಲೀಸರು!

ಬೆಂಗಳೂರು: ಯಲಹಂಕ ನ್ಯೂಟೌನ್‌ನಲ್ಲಿ ನವೆಂಬರ್ 13ರಂದು ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಅವರನ್ನು ಕಚೇರಿ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಕಾರಿನಲ್ಲಿ ಬಂದಿದ್ದ ಚರಣ್ ಮೇಲೆ, ಪತ್ನಿ ಕಾರಿನಿಂದ ಇಳಿದು ಒಳಗೆ ಹೋಗುತ್ತಿದ್ದಂತೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕೃತ್ಯದಲ್ಲಿ ಇಬ್ಬರು ವ್ಯಕ್ತಿಗಳು ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳ ಗುರುತು ಪತ್ತೆಯಾಗಿದ್ದು, ಕೊಲೆಗೆ ಅಸಲಿ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಚರಣ್ ಬಳಿಕ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಕಾಲಿಟ್ಟಿದ್ದರು. ಪ್ರಕರಣದ ತನಿಖೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.

Share News

About BigTv News

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *