ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ದೊಡ್ಡಕೆರೆ ಬರಿದಾಗುತ್ತಿದ್ದಂತೆ ಅಕ್ರಮ ಫಿಲ್ಟರ್ ಮರಳು ದಂಧೆ ಮತ್ತೆ ಆರಂಭವಾಗಿದೆ. ದಂಧೆ ನಿಯಂತ್ರಿಸುವಲ್ಲಿ ವಿಫಲವಾದ ಆರೋಪದ ಹಿನ್ನೆಲೆಯಲ್ಲಿ ನಂಗಲಿ ಠಾಣೆಯ ಪಿಎಸ್‌ಐ ವಿದ್ಯಾಶ್ರೀ ಹಾಗೂ ಕಾನ್ಸ್‌ಟೇಬಲ್ ಪ್ರವೀಣ್ ಅವರನ್ನು ಅಮಾನತುಗೊಳಿಸಲಾಗಿದೆ. ಶುಕ್ರವಾರ ರಾತ್ರಿ ಅಕ್ರಮ ಮರಳು ಅಡ್ಡೆ ಮೇಲೆ ಮುಳಬಾಗಿಲು ಎಎಸ್ಪಿ ಮೋನಿಷಾ ದಾಳಿ ನಡೆಸಿ, ಮರಳು ಸಾಗಾಟಕ್ಕೆ ಬಳಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಜೆಸಿಬಿ ಯಂತ್ರವನ್ನು ವಶಪಡಿಸಿಕೊಂಡಿದ್ದರು. ಈ ಕುರಿತು ಸಲ್ಲಿಕೆಯಾದ ವರದಿ ಆಧರಿಸಿ ಕೋಲಾರ ಎಸ್‌ಪಿ ಕನ್ನಿಕಾ ಸಿಕ್ರಿವಾಲ್ ಅವರು ಇಬ್ಬರ ವಿರುದ್ಧ ಅಮಾನತು ಆದೇಶ ಹೊರಡಿಸಿದ್ದಾರೆ. ಈ ಕ್ರಮ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
