ವಿಜಯಪುರ: ಜಮೀನು ವಿವಾದದ ಹಿನ್ನೆಲೆಯಲ್ಲಿ ಕಬ್ಬು ಕಟಾವು ಮಾಡಲು ಹೋದ ತಂದೆ-ಮಗನನ್ನು ದೊಣ್ಣೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದಲ್ಲಿ ನಡೆದಿದೆ. ಹನುಮಂತ ಸಾಲವಾಡಗಿ ಹಾಗೂ ಪುತ್ರ ಮಂಜುನಾಥ ಮೃತಪಟ್ಟವರು. ಹನುಮವ್ವ ಮೇಟಿ ಅವರಿಗೆ ಸೇರಿದ ಜಮೀನಿನಲ್ಲಿ ಸಾಲವಾಡಗಿ ಕುಟುಂಬ ಕಬ್ಬು ಬೆಳೆದಿತ್ತು. ಕಟಾವು ಮಾಡಲು ಹೋದಾಗ ಪಾಲಿನ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಹಲ್ಲೆಯಿಂದ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿಯಪ್ಪ, ರಾಮಪ್ಪ, ಹನುಮಂತ ಹಾಗೂ ನಾಗಪ್ಪ ಮೇಟಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
