Breaking News

ಬೆಂಗಳೂರು | ಪಿಎಸ್‌ಐ ಮೇಲೆ ಹಲ್ಲೆ: ಚಾಲಕನ ಬಂಧನ

ಬೆಂಗಳೂರು: ಮದ್ಯಪಾನ ಮಾಡಿ ಕಾರು ಚಲಾಯಿಸಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ, ಸಮವಸ್ತ್ರ ಹರಿದ ಘಟನೆ ಮಹದೇಶ್ವರ ನಗರದಲ್ಲಿ ನಡೆದಿದೆ. ನ.13ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಆರೋಪಿ ಸಚಿನ್ (35) ಎಂಬಾತನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾರು ಬ್ರೋಕರ್ ಸಚಿನ್ ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಮನೆಯೊಂದರ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಆಲ್ಕೋಮೀಟರ್ ಪರೀಕ್ಷೆಗೆ ಸಹಕರಿಸುವಂತೆ ಸೂಚಿಸಿದಾಗ ನಿರಾಕರಿಸಿ, ವಾಗ್ವಾದ ನಡೆಸಿದ್ದಾನೆ. ಈ ವೇಳೆ ಸಾರ್ವಜನಿಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರ ವಾಹನಕ್ಕೆ ಕೂರಿಸಲು ಮುಂದಾದಾಗ ಪಿಎಸ್‌ಐ ಕೃಷ್ಣ ಅವರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದಿದ್ದಾನೆ. ರಕ್ತದ ಮಾದರಿ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗಲೂ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಸಂಬಂಧ ಪಿಎಸ್‌ಐ ನೀಡಿದ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಒಂದು ಕಾಲ್ ಮಾಡಬೇಕಿತ್ತು, ಪೋನ್ ಕೊಡ್ತೀರಾ ಅಂತ ಯಾರಾದ್ರೂ ಕೇಳಿದ್ರೆ ಎಚ್ಚರ!

ಮಂಡ್ಯ: ಅಪರಿಚಿತ ಮಹಿಳೆಗೆ ಮೊಬೈಲ್ ಕರೆ ಮಾಡಲು ಫೋನ್ ನೀಡಿದ್ದ ಯುವಕನೊಬ್ಬ ಕೊಲೆ ಆರೋಪ ಎದುರಿಸಿ ಎರಡೂವರೆ ವರ್ಷ ಜೈಲು …

Leave a Reply

Your email address will not be published. Required fields are marked *