Breaking News

ಯುವಕನ ವಿರುದ್ಧ ಪೋಕ್ಸೊ ಪ್ರಕರಣ

ಕಾರವಾರ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಶಂಶಾದ್ (22) ಎಂಬಾತನ ವಿರುದ್ಧ ಚಿತ್ತಾಕುಲ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕ್ಷೌರಿಕ ಕೆಲಸ ಮಾಡುತ್ತಿದ್ದ ಆರೋಪಿ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಆರೋಪಿ ಪರಾರಿಯಾಗಿದ್ದು, ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜರಂಗ ದಳ, ವಿಶ್ವ ಹಿಂದೂ ಪರಿಷತ್, ಶಿವಾಜಿ ಬಾಯ್ಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಬಿಜೆಪಿ ಮುಖಂಡರು ಚಿತ್ತಾಕುಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

Share News

About BigTv News

Check Also

ಒಂದು ಕಾಲ್ ಮಾಡಬೇಕಿತ್ತು, ಪೋನ್ ಕೊಡ್ತೀರಾ ಅಂತ ಯಾರಾದ್ರೂ ಕೇಳಿದ್ರೆ ಎಚ್ಚರ!

ಮಂಡ್ಯ: ಅಪರಿಚಿತ ಮಹಿಳೆಗೆ ಮೊಬೈಲ್ ಕರೆ ಮಾಡಲು ಫೋನ್ ನೀಡಿದ್ದ ಯುವಕನೊಬ್ಬ ಕೊಲೆ ಆರೋಪ ಎದುರಿಸಿ ಎರಡೂವರೆ ವರ್ಷ ಜೈಲು …

Leave a Reply

Your email address will not be published. Required fields are marked *