ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಆಂಜನೇಯ ದೇವಸ್ಥಾನದಲ್ಲಿ ದನದ ಮಾಂಸದ ತ್ಯಾಜ್ಯ ಎಸೆದಿರುವ ಘಟನೆ ನವೆಂಬರ್ 15ರಂದು ಬೆಳಕಿಗೆ ಬಂದಿದೆ. ಮುಂಜಾನೆ ಪೂಜೆಗೆಂದು ದೇವಸ್ಥಾನಕ್ಕೆ ಬಂದ ಅರ್ಚಕರು ಇದನ್ನು ಗಮನಿಸಿದ್ದಾರೆ. ಘಟನೆಯಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೃತ್ಯವನ್ನು ಖಂಡಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೇವಸ್ಥಾನದಲ್ಲಿ ಮಾಂಸದ ತ್ಯಾಜ್ಯ ಎಸೆದವರನ್ನು ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
