ಆನೇಕಲ್: ಕ್ರಿಕೆಟ್ ಪಂದ್ಯದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಎರಡು ಯುವಕರ ಗುಂಪುಗಳ ನಡುವೆ ಮಾರಾಮಾರಿಗೆ ತಿರುಗಿದ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ಪಟ್ಟಣದ ಎ.ಎಸ್.ಬಿ. ಆಟದ ಮೈದಾನದಲ್ಲಿ ನಡೆದಿದೆ. ಪಂದ್ಯದ ವೇಳೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಯುವಕರು ಬ್ಯಾಟ್ ಹಾಗೂ ವಿಕೆಟ್ ಹಿಡಿದು ಪರಸ್ಪರ ಹಲ್ಲೆ ನಡೆಸಿದ್ದಾರೆ. ಕೆಲವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಲಾಗಿದ್ದು, ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಶನಿವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
