ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಏಳು–ಎಂಟು ಸ್ಕ್ರಾಪ್ ಅಂಗಡಿಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಅತ್ತಿಬೆಲೆ, ಆನೇಕಲ್ ಹಾಗೂ ಜಿಗಣಿ ಭಾಗಗಳಲ್ಲಿ ನಡೆದಿದೆ. ಸುದ್ದುಗುಂಟೆಪಾಳ್ಯದ ಈರುಳ್ಳಿ ವ್ಯಾಪಾರಿ ಜೀವನ್ ರಾಜ್, ಪತ್ನಿ ಮಗನೊಂದಿಗೆ ತವರು ಮನೆಗೆ ಹೋದಿದ್ದರಿಂದ ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಅಕ್ಟೋಬರ್ 22ರಂದು ಸ್ಕ್ರಾಪ್ ಅಂಗಡಿಗಳಿಗೆ ಬೆಂಕಿ ಹಚ್ಚಿ, ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವೇಳೆ ಅಂಗಡಿಯೊಂದರಲ್ಲಿ ಮಲಗಿದ್ದ ಮಣಿಕಂಠ ಎಂಬುವವರು ಹೊಗೆಯಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರಂಭದಲ್ಲಿ ಆಕಸ್ಮಿಕ ಬೆಂಕಿ ಎಂದು ಭಾವಿಸಿದ್ದ ಪೊಲೀಸರು, ಸರಣಿ ಘಟನೆಗಳಿಂದ ಅನುಮಾನಗೊಂಡು 200ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಅತ್ತಿಬೆಲೆ ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಸಿಟಿ-100 ಬೈಕ್‌ನಲ್ಲಿ ಓಡಾಡುತ್ತಿದ್ದ ಜೀವನ್ ರಾಜ್‌ನನ್ನು ಪತ್ತೆಹಚ್ಚಿ ಬಂಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

