Breaking News

ಲೇಡಿಸ್ ಹಾಸ್ಟೆಲ್​​​​​​​​​​​​​​​​​​​​​​​​​​​​​​​​​​​​​ ಈತನ ಟಾರ್ಗೆಟ್: ವಿದ್ಯಾರ್ಥಿನಿಯರ ಮುಂದೆ ಅಪರಿಚಿತನಿಂದ ಅಸಭ್ಯ ವರ್ತನೆ

ಹಾವೇರಿ: ಅಪರಿಚಿತ ವ್ಯಕ್ತಿಯೊಬ್ಬ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಕೆರಿಮತ್ತಿಹಳ್ಳಿ ಬಳಿಯ ಸ್ನಾತಕೋತ್ತರ ಮಹಿಳಾ ವಿದ್ಯಾರ್ಥಿನಿಲಯ ಹಾಗೂ ನಗರದ ಹೊರವಲಯದಲ್ಲಿರುವ ಮಹಿಳಾ ಹಾಸ್ಟೆಲ್‌ಗಳ ಬಳಿ ಬಂದು ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆಯುತ್ತಿದ್ದಾನೆ ಎನ್ನಲಾಗಿದೆ. ಕಳೆದ ಎರಡು–ಮೂರು ತಿಂಗಳಿಂದ ಈ ಕೃತ್ಯ ನಡೆಯುತ್ತಿದ್ದು, ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ. ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವಾಚ್‌ಮನ್ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳಿಲ್ಲ. ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Share News

About BigTv News

Check Also

ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು

ಮೈಸೂರು: ಕೇರಳದಲ್ಲಿ ಪ್ರಗತಿಪರ ಯುವ ರೈತ ಪ್ರಶಸ್ತಿ ಪಡೆದಿದ್ದ 31 ವರ್ಷದ ಧನೇಶ್ ಎಸ್. ನಾಯರ್ ಅಲಿಯಾಸ್ ಡ್ಯಾನಿ, ಮೈಸೂರಿನ …

Leave a Reply

Your email address will not be published. Required fields are marked *