ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲದ ವಿರುದ್ಧ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಒಂದು ತಿಂಗಳಲ್ಲಿ 8.80 ಕೋಟಿ ರೂ. ಮೌಲ್ಯದ 32,384 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಅಕ್ಕಿಯ ಜೊತೆಗೆ 220 ವಾಹನಗಳು, 1,817 ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ 14,258 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಒಟ್ಟು 15 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 266 ಆರೋಪಿಗಳನ್ನು ಬಂಧಿಸಲಾಗಿದೆ. ಜಿಲ್ಲಾವಾರು ಜಪ್ತಿಯಲ್ಲಿ ಕೋಲಾರ ಮೊದಲ ಸ್ಥಾನದಲ್ಲಿದ್ದು, 3.81 ಕೋಟಿ ರೂ. ಮೌಲ್ಯದ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ದಂಧೆ ವಿರುದ್ಧ ಮುಂದೆಯೂ ದಾಳಿ ಮುಂದುವರಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
