ಬೆಂಗಳೂರು: ಏಳು ತಿಂಗಳ ಬಾಕಿ ಸಂಬಳ ಕೇಳಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದ ವಾಟರ್ ಟ್ಯಾಂಕರ್ ಚಾಲಕನನ್ನು ಮಾಲೀಕನೇ ಸಹಚರರೊಂದಿಗೆ ಅಪಹರಿಸಿ ಹಲ್ಲೆ ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ್‌ಗೆ ಮಾಲೀಕ ಶ್ರೀನಿವಾಸ್ 2 ಲಕ್ಷ ರೂ. ಸಂಬಳ ಬಾಕಿ ಉಳಿಸಿಕೊಂಡಿದ್ದ. ಈ ಬಗ್ಗೆ ದೂರು ನೀಡಲು ಮುಂದಾದಾಗ ರಾಡ್‌ನಿಂದ ಹಲ್ಲೆ ನಡೆಸಿ ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಥಳಿಸಿದ್ದಾರೆ. ಆರೋಪಿಗಳು ಮದ್ಯಪಾನ ಮಾಡುತ್ತಿದ್ದಾಗ ಪ್ರಜ್ಞೆ ಮರಳಿಸಿಕೊಂಡ ಮೋಹನ್ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಜೀವನ್ ಭೀಮಾ ನಗರ ಪೊಲೀಸರು ಮೂವರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
