ಶಿರಾಳಕೊಪ್ಪ: ಸೊಸೆ ಕಿರುಕುಳಕ್ಕೆ ಬೇಸತ್ತು 55 ವರ್ಷದ ಶಿವಮೂರ್ತಿ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ನೇರಲಗಿ ಗ್ರಾಮದಲ್ಲಿ ನಡೆದಿದೆ. ಕುರಿ ಮೇಯಿಸಲು ಹೋಗಿದ್ದ ಅವರು ಅರುಣಗೌಡ ಎಂಬುವವರ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಶಿವಮೂರ್ತಿ ಅವರ ಪುತ್ರ ಸಂತೋಷ್, 7-8 ವರ್ಷಗಳ ಹಿಂದೆ ಸೃಷ್ಟಿ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಎರಡು ವರ್ಷಗಳಿಂದ ಕುಟುಂಬದಲ್ಲಿ ಗಲಾಟೆಗಳು ನಡೆಯುತ್ತಿದ್ದವು. ಈ ಹಿಂದೆ ಸೃಷ್ಟಿ ಪತಿ ಹಾಗೂ ಅತ್ತೆ, ಮಾವ ಮತ್ತು ಮೈದುನನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೊಸೆಯ ಕುಟುಂಬದವರು ಮನೆಗೆ ಬಂದು ಗಲಾಟೆ ಮಾಡಿದ್ದರಿಂದ ಪತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ರೇಣುಕಮ್ಮ ಆರೋಪಿಸಿದ್ದಾರೆ. ಈ ಸಂಬಂಧ ಸೃಷ್ಟಿ ಸೇರಿದಂತೆ ಐವರ ವಿರುದ್ಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
