Breaking News

ಹುಬ್ಬಳ್ಳಿ ವ್ಯಕ್ತಿಗೆ ಟ್ರೇಡಿಂಗ್ ಹೆಸರಿನಲ್ಲಿ ₹4.86 ಲಕ್ಷ ವಂಚನೆ

ಹುಬ್ಬಳ್ಳಿ: ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಇಬ್ಬರಿಗೆ ಸೈಬರ್ ವಂಚಕರು ಒಟ್ಟು ₹8.28 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ರಾಜೀವ ನಗರದ ನಿವೃತ್ತ ನೌಕರ ಮುರಗೇಶ ಗಂಗಾಲ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿದ್ದಾನೆ. ನಂತರ ಕೆ.ಸಿ. ಡಿಮ್ಯಾಟ್ ಎಂಬ ಎಪಿಕೆ ಆ್ಯಪ್ ಡೌನ್‌ಲೋಡ್ ಮಾಡಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹4.86 ಲಕ್ಷ ವರ್ಗಾಯಿಸಿಕೊಂಡಿದ್ದಾರೆ. ಆ್ಯಪ್‌ನಲ್ಲಿ ಲಾಭ ತೋರಿಸಿದರೂ ಹಣ ಹಿಂಪಡೆಯಲು ಸಾಧ್ಯವಾಗದೆ ವಂಚನೆ ಬೆಳಕಿಗೆ ಬಂದಿದೆ. ಇನ್ನೊಂದು ಪ್ರಕರಣದಲ್ಲಿ ವಿಜಯನಗರದ ಕೆ. ಕೃಷ್ಣಕಾಂತ ಅವರಿಗೆ ಟೆಲಿಗ್ರಾಂ ಮೂಲಕ ಹಣ ದುಪ್ಪಟ್ಟಾಗಿಸುವ ಆಮಿಷವೊಡ್ಡಿ ₹3.42 ಲಕ್ಷ ವಂಚಿಸಲಾಗಿದೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಮಹಿಳಾ ಮೆಕ್ಯಾನಿಕ್‌ಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಬಂಧನ

ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಮಹಿಳಾ ಮೆಕ್ಯಾನಿಕ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಸಹೋದ್ಯೋಗಿ ಶಿವರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *