ಕಲಬುರಗಿ: ಮಹಿಳೆಯ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಪೊಲೀಸ್ ಪೇದೆ ಸೈಯದ್ ತೌಶೀಫ್ ಹುಸೇನ್ (41) ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 40 ವರ್ಷದ ಸಮಾಜ ಸೇವಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2023ರಿಂದ ಪರಿಚಯವಿದ್ದ ಆರೋಪಿ, ಪ್ರೀತಿ ಸಂಬಂಧ ಬೆಳೆಸುವಂತೆ ಒತ್ತಾಯಿಸಿ ನಿರಾಕರಿಸಿದಾಗ ದೂರವಾಣಿ ಮೂಲಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆ.7ರಂದು ರಾತ್ರಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯ ಬಳಿಕ ದೂರು ನೀಡದಂತೆ ಕ್ಷಮೆ ಕೇಳಿ ಒತ್ತಡ ಹೇರಿದ್ದಲ್ಲದೆ, ಸೆಪ್ಟೆಂಬರ್‌ನಲ್ಲಿಯೂ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಕುಟುಂಬದವರೊಂದಿಗೆ ಚರ್ಚಿಸಿದ ಬಳಿಕ ನವೆಂಬರ್ 15ರಂದು ಮಹಿಳೆ ದೂರು ನೀಡಿದ್ದಾರೆ. ವಿವಿಧ ಬಿಎನ್‌ಎಸ್ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
