Breaking News

ಪಾರ್ಟನರ್​ನಿಂದಲೇ ₹30 ಲಕ್ಷದ ಸುಪಾರಿ: ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಕೊಲೆ ರಹಸ್ಯ ಕೊನೆಗೂ ಬಯಲು, ಐವರ ಬಂಧನ

ಬೆಂಗಳೂರು: ಯಲಹಂಕ ನ್ಯೂ ಟೌನ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ (35) ಅವರನ್ನು ಹಾಡಹಗಲೇ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಚರಣ್ ಹತ್ಯೆಗೆ ₹30 ಲಕ್ಷ ಸುಪಾರಿ ನೀಡಲಾಗಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ಚರಣ್ ಅವರ ವ್ಯವಹಾರದ ಪಾಲುದಾರ ಕಿರಣ್ ಎಂಬಾತನೇ ಹತ್ಯೆಗೆ ಸುಪಾರಿ ನೀಡಿದ್ದ ಎನ್ನಲಾಗಿದೆ. ವ್ಯವಹಾರದಲ್ಲಿ ಉಂಟಾದ ಭಿನ್ನಾಭಿಪ್ರಾಯ ಹಾಗೂ ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ದ್ವೇಷ ಬೆಳೆದಿತ್ತು. ಇದೇ ಕಾರಣಕ್ಕೆ ಕಿರಣ್, ರುದ್ರೇಶ್ ಮೂಲಕ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 13ರಂದು ಕಚೇರಿಗೆ ಬರುತ್ತಿದ್ದ ಚರಣ್ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಲಾಂಗ್ ಮತ್ತು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಪತ್ನಿಯ ಕಣ್ಣೆದುರೇ ಈ ಕೃತ್ಯ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮಹಿಳಾ ಮೆಕ್ಯಾನಿಕ್‌ಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಬಂಧನ

ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಮಹಿಳಾ ಮೆಕ್ಯಾನಿಕ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಸಹೋದ್ಯೋಗಿ ಶಿವರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *